ಪಾಕ್ನಲ್ಲಿ ಮುಂದುವರಿದ ಹೈಡ್ರಾಮಾ
ಪಾಕಿಸ್ತಾನದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಪಾಕ್ ಸುಪ್ರೀಂಕೋರ್ಟ್‍ನಲ್ಲಿ ಪ್ರಧಾನಿ ಇಮ್ರಾನ್ ಖಾನ್‍ಗೆ ಹಿನ್ನಡೆ ಆಗಿದೆ. ಚುನಾವಣೆ ಅತ್ಯಗತ್ಯ, ಆದ್ರೆ ಅದು ಅವಿಶ್ವಾಸ ನಿಲುವಳಿ ಮೇಲಿನ ಮತದಾನದಿಂದ ನಿರ್ಧಾರವಾಗಲಿ ಎಂದು ಪಾಕಿಸ್ತಾನ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಬೆನ್ನಲ್ಲೇ ಪಾಕಿಸ್ತಾನ ಸುಪ್ರೀಂಕೋರ್ಟ್‍ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ಹೆಸರನ್ನು ಹಂಗಾಮಿ ಪ್ರಧಾನಿ ಹುದ್ದೆಗೆ ಇಮ್ರಾನ್ ಖಾನ್ ಪ್ರಸ್ತಾಪಿಸಿದ್ದಾರೆ. ಹೊಸ ಹಂಗಾಮಿ ಪ್ರಧಾನಿ ಅಧಿಕಾರ ಸ್ವೀಕರಿಸುವವರೆಗೂ ಇಮ್ರಾನ್ ಖಾನ್ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಈ ಮಧ್ಯೆ, ಪಾಕ್ ರಾಜಕೀಯದಲ್ಲಿ ವಿದೇಶಿ ಹಸ್ತಕ್ಷೇಪವಿಲ್ಲ. ಯಾವ ದೇಶವೂ ನಮ್ಮ ದೇಶದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಿಲ್ಲ ಅಂತ ಗುಪ್ತಚರ ಪಡೆ ಸ್ಪಷ್ಟಪಡಿಸಿದೆ.