ವಿಮಾನ ತಯಾರಿಕೆ ಗುತ್ತಿಗೆ ಪ್ರಕರಣ: ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

ಶನಿವಾರ, 27 ಅಕ್ಟೋಬರ್ 2018 (19:35 IST)
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕೆ ಮುಂದುವರಿಸಿದ್ದಾರೆ.

ರಫೇಲ್ ಪ್ರಕರಣದಲ್ಲಿ ಹೆಚ್ ಎ ಎಲ್ ಗೆ ನಷ್ಟ ಉಂಟುಮಾಡಲಾಗಿದೆ ಎಂದು ಖರ್ಗೆ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ವಿರುದ್ಧ ಆರೋಪಗಳನ್ನು ಮುಂದುವರಿಸಿದ್ದಾರೆ. ರಫೇಲ್ ಯುದ್ಧ ವಿಮಾನ ತಯಾರಿಕೆ ಗುತ್ತಿಗೆಯನ್ನು ಪ್ರಧಾನಿಯು ತಮ್ಮ ಸ್ನೇಹಿತ ಅನಿಲ್ ಅಂಬಾನಿ ಕಂಪೆನಿಗೆ ಕೊಡಿಸುವ ನಿಟ್ಟಿನಲ್ಲಿ ಹೆಚ್ ಎ ಎಲ್ ಗೆ ನಷ್ಟವನ್ನುಂಟು ಮಾಡಿದ್ದಾರೆ. ಹೀಗಂತ ಖರ್ಗೆ ಆರೋಪ ಮಾಡಿದ್ದಾರೆ.

ಹೆಚ್ ಎ ಎಲ್ ನ ಪರಿಶಿಷ್ಟ ಜಾತಿ ವರ್ಗದ ಕಾರ್ಮಿಕರು ಮತ್ತು ಅಧಿಕಾರಿಗಳ ಸಂಘ ಆಯೋಜನೆ ಮಾಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಚ್ ಎ ಎಲ್ ಗೆ ದೊರಕಬೇಕಾದ ರಫೇಲ್ ಗುತ್ತಿಗೆ ಕೆಲಸ ಅಂಬಾನಿ ಅದಾನಿ ಅವರ ಖಾಸಗಿ ಕಂಪನಿಗಳಿಗೆ ಸಿಕ್ಕಿರುವುದು ಹೇಗೆ ಎಂದು ಪ್ರಶ್ನಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ