ಅಪ್ರಾಪ್ತ ಬಾಲಕಿಯ ಶರ್ಟ್ ಒಳಗೆ ಯಡಿಯೂರಪ್ಪ ಕೈ ಹಾಕಿದ್ದರು ವಕೀಲ

Krishnaveni K

ಗುರುವಾರ, 19 ಡಿಸೆಂಬರ್ 2024 (11:16 IST)
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪವಿದೆ. ಇದನ್ನು ಪ್ರಾಸಿಕ್ಯೂಟರ್ ನ್ಯಾಯಾಲಯದಲ್ಲಿ ಬಹಿರಂಗಪಡಿಸಿದ್ದಾರೆ.

ತಮ್ಮ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳ ಆರೋಪ ಕೈ ಬಿಡಬೇಕು ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ಹಿರಿಯ ಪ್ರಾಸಿಕ್ಯೂಟರ್ ರವಿವರ್ಮ ಕುಮಾರ್ ದೋಷಾರೋಪ ಪಟ್ಟಿಯಲ್ಲಿರುವ ಅಂಶವನ್ನು ಉಲ್ಲೇಖಿಸಿದರು.

ದೋಷಾರೋಪ ಪಟ್ಟಿಯಲ್ಲಿ ಸ್ವತಃ ಯಡಿಯೂರಪ್ಪನವರೇ ಬಾಲಕಿ ಮೇಲೆ ರೇಪ್ ನಡೆದಿದೆಯೇ ಎಂದು ಖಚಿತಪಡಿಸಲು ಬಾಲಕಿಯ ಶರ್ಟ್ ಒಳಗೆ ಕೈ ಹಾಕಿರುವುದಾಗಿ ಒಪ್ಪಿಕೊಂಡಿರುವುದಾಗಿ ದಾಖಲಿಸಲಾಗಿದೆ. ರೇಪ್ ನಡೆದಿದೆಯೋ ಇಲ್ಲವೋ ಎಂದು ಪರಿಶೀಲಿಸಲು ಬಾಲಕಿಯ ಶರ್ಟ್ ಒಳಗೆ ಕೈ ಹಾಕಿದ್ದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಇದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವಲ್ಲವೆ ಎಂದು ವಕೀಲ ರವಿವರ್ಮ ಕುಮಾರ್ ಪ್ರಶ್ನಿಸಿದ್ದಾರೆ.

ಆದರೆ ಈ ವಾದವನ್ನು ಅಲ್ಲಗಳೆದ ಯಡಿಯೂರಪ್ಪ ಪರ ವಕೀಲ ಸಿವಿ ನಾಗೇಶ್, ಸಂತ್ರಸ್ತ ಬಾಲಕಿಯ ತಾಯಿ ಈ ಪ್ರಕರಣದಲ್ಲಿ ದೂರುದಾರರು. ಒಂದೂವರೆ ತಿಂಗಳ ನಂತರ ಪ್ರಕರಣ ದಾಖಲಿಸಲಾಗಿದೆ. ಯಡಿಯೂರಪ್ಪ ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂಬ ಬಾಲಕಿಯ ಹೇಳಿಕೆ ಇದೆ. ವಾಸ್ತವವಾಗಿ ಹಲವು ಜನರ ಸಮ್ಮುಖದಲ್ಲಿ ಇಂತಹ ಕೃತ್ಯ ಎಸೆಯಲು ಸಾಧ್ಯವೇ? ಬಾಲಕಿಯ ಹೇಳಿಕೆ ಆಧರಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದಿದ್ದಾರೆ.

ಇದಕ್ಕೆ ನ್ಯಾಯಮೂರ್ತಿ ನಾಗಪ್ರಸನ್ನ, 164 ರ ಅಡಿಯಲ್ಲಿ ಬಾಲಕಿಯ ಹೇಳಿಕೆಯನ್ನೂ ಪರಿಗಣಿಸಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಸಿವಿ ನಾಗೇಶ್, ಯಡಿಯೂರಪ್ಪನವಿರಗೆ ಈಗ 82 ವರ್ಷ. ಲೈಟ್ ಸ್ವಿಚ್ ಹಾಕಲೂ ಕೈ ನಡುಗತ್ತದೆ. ರೂಮಿಗೆ ಬಾಲಕಿ ಹೋಗಿರಲಿಲ್ಲ ಎಂಬುದಕ್ಕೆ ಸಾಕ್ಷ್ಯವಿದೆ. ಯಡಿಯೂರಪ್ಪ ಹಾಲ್ ಬಿಟ್ಟು ಎಲ್ಲೂ ಹೋಗಿರಲಿಲ್ಲ. ಅವರ ಅಂಗರಕ್ಷಕರೆಲ್ಲರೂ ಅಲ್ಲೇ ಇದ್ದಾರೆ. ಅವರೇ ಇದನ್ನು ಖಚಿತಪಡಿಸಿದ್ದಾರೆ. ಕೇವಲ ಬಾಲಕಿಯ ತಾಯಿಯ ಹೇಳಿಕೆಯ ಆಧಾರದಲ್ಲಿ ದೋಷಾರೋಪಪಟ್ಟಿ ತಯಾರಿಸಲಾಗಿದೆ. ಬೇರೊಬ್ಬ ರಾಜಕಾರಣಿಯ ಮಾತು ಕೇಳಿ ಬಾಲಕಿಯ ತಾಯಿ ದೂರು ನೀಡಿದ್ದರು ಎಂದು ಆರೋಪ ಮಾಡಿದ್ದರು. ಬಳಿಕ ವಿಚಾರಣೆಯನ್ನು ಮುಂದೂಡಲಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ