ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಹಬ್ಬ ದಸರಾ ನಂತರ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಅನುಮತಿ ಪಡೆದು ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿ ಪೂರ್ಣಗೊಳಿಸಲಾಗುತ್ತದೆ. ಈಗಾಗಲೇ ಈ ಕುರಿತು ಎಲ್ಲರೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು.
ರಾಜಕೀಯಕ್ಕೆ ಡಾ.ಯತೀಂದ್ರ ಆಗಮನ......
ನನ್ನ ಪುತ್ರ ಡಾ.ಯತೀಂದ್ರನನ್ನು ಬಲವಂತವಾಗಿ ರಾಜಕೀಯಕ್ಕೆ ಕರೆತರುವುದಿಲ್ಲ. ರಾಕೇಶ್ ಅಕಾಲಿಕ ನಿಧನದ ನಂತರ ಯತೀಂದ್ರ ವರುಣಾ ಕ್ಷೇತ್ರವನ್ನು ನೋಡಿಕೊಳ್ಳುತ್ತಿದ್ದಾನೆ. ನಾನು ರಾಜ್ಯದ ಮುಖ್ಯಮಂತ್ರಿಯಾದ ಕಾರಣ ಸ್ವ-ಕ್ಷೇತ್ರದ ಕಡೆ ಹೆಚ್ಚು ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಜನತೆ ಬಯಸಿದರೇ ಯತೀಂದ್ರ ರಾಜ್ಯ ರಾಜಕೀಯಕ್ಕೆ ಬರುತ್ತಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.