ಹಾಸನ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು. ಅದರ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅದು ಹಾಸನಾಂಬೆ ದೇವಿಯ ದರ್ಶನ ಪಡೆದರು.
ಜಿಲ್ಲೆಗೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಡಳಿತ ವ್ಯವಸ್ಥೆ ಮಾಡಿದ ಶಿಷ್ಟಾಚಾರದ ವಾಹನದಲ್ಲೇ ದೇಗುಲಕ್ಕೆ ಬಂದರು. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ದೇಗುಲಕ್ಕೆ ಸ್ವಾಗತಿಸಿದರು.
ಸಿದ್ದರಾಮಯ್ಯ ಅವರ ಜೊತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಇದ್ದರು. ಬಳಿಕ ಜಿಲ್ಲಾಡಳಿತ ಸಿಎಂ ಅವರನ್ನು ಮಂಗಳವಾದ್ಯಗಳೊಂದಿಗೆ ದೇವಿ ದರ್ಶನಕ್ಕೆ ಕರೆದೊಯ್ಯಿತು.
ಕಳೆದ ಎರಡು ವರ್ಷಗಳಿಂದ ಸಿಎಂ ಸಿದ್ದರಾಮಯ್ಯ ದೇವಿ ದರ್ಶನ ಪಡೆಯುತ್ತಿದ್ದು, ಈ ಮೂಲಕ ಮೂರನೇ ಬಾರೀ ದೇವಿ ದರ್ಶನ ಪಡೆದುಕೊಂಡಿದ್ದಾರೆ. ದೇವಿ ದರ್ಶನ ಪಡೆದು ದರ್ಬಾರ್ ಗಣಪತಿ ಹಾಗೂ ಸಿದ್ದೇಶ್ವರಸ್ವಾಮಿ ದೇವರ ದರ್ಶನ ಪಡೆದರು.
ಇಂದು ಐತಿಹಾಸಿಕ ಹಾಸನಾಂಬಾ ದೇವಿಯ ಉತ್ಸವದಲ್ಲಿ ಪಾಲ್ಗೊಂಡು, ತಾಯಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದೆ. ಹಾಸನಾಂಬೆಯ ಆಶೀರ್ವಾದ ನಾಡಿನ ಸಮಸ್ತ ಜನರ ಮೇಲಿರಲಿ, ಎಲ್ಲರ ಮನೆಗಳಲ್ಲಿ ಸುಖ, ಶಾಂತಿ, ಸಮೃದ್ಧಿ ಚಿರಕಾಲ ನೆಲೆಸಲಿ ಎಂದು ಈ ವೇಳೆ ಪ್ರಾರ್ಥಿಸಿದೆ ಎಂದು ಎಕ್ಸ್‌ನಲ್ಲಿ ಸಿಎಂ ಬರೆದುಕೊಂಡಿದ್ದಾರೆ.