ಬೆಂಗಳೂರು: ಮೇ 12 ರಂದು ನಡೆದ ವಿಧಾನಸಭೆ ಚುನಾವಣಾ ಫಲಿತಾಂಶ ನಾಳೆ ಘೋಷಣೆಯಾಗಲಿದ್ದು, ಅದಕ್ಕೂ ಮೊದಲು ರಾಜ್ಯದ ಜನತೆಗೆ ವಿದ್ಯುತ್ ಬೆಲೆ ಏರಿಕೆ ಶಾಕ್ ಸಿಗಲಿದೆ.
ಇಂದು ಪರಿಷ್ಕೃತ ವಿದ್ಯುತ್ ದರ ಹೆಚ್ಚಳದ ಕುರಿತು ಕರ್ನಾಟಕ ವಿದ್ಯುತ್ ನಿಗಮ ಮಂಡಳಿ ಪ್ರಕಟಿಸುವ ಸಾಧ್ಯತೆಯಿದೆ. ಈ ಬಾರಿ 80 ಪೈಸೆಯಿಂದ 1.60 ರೂ. ವರೆಗೆ ವಿದ್ಯುತ್ ದರ ಹೆಚ್ಚಳವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಪ್ರತೀ ವರ್ಷ ನವಂಬರ್ ನಲ್ಲೇ ವಿದ್ಯುತ್ ದರ ಪರಿಷ್ಕರಣೆಯಾಗುತ್ತದೆ. ಆದರೆ ಈ ಬಾರಿ ಚುನಾವಣೆ ಇದ್ದಿದ್ದರಿಂದ ದರ ಹೆಚ್ಚಳವಾಗಿರಲಿಲ್ಲ. ಆದರೆ ಇದೀಗ ಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರವೂ ಹೆಚ್ಚಿಸಲು ರಾಜ್ಯ ವಿದ್ಯುತ್ ನಿಯಂತ್ರಣ ಮಂಡಳಿ ನಿರ್ಧರಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.