ಪ್ರಜ್ವಲ್‌ ಬಳಿಕ ಈಗ ರೇವಣ್ಣ ವಿರುದ್ಧವೂ ಸಮನ್ಸ್‌ ಜಾರಿಗೆ ಆದೇಶ

ಮಂಗಳವಾರ, 5 ಸೆಪ್ಟಂಬರ್ 2023 (19:32 IST)
ಚುನಾವಣೆ ವೇಳೆ ಹಲವು ಅಕ್ರಮ ಎಸಗಿರುವ ಆರೋಪದ ಮೇಲೆ ಹೊಳೆನರಸೀಪುರ ಕ್ಷೇತ್ರದಿಂದ ಎಚ್‌.ಡಿ.ರೇವಣ್ಣ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿರುವ ಅರ್ಜಿ ಸಂಬಂಧ ವಿಧಾನಸಭೆ ಕಾರ್ಯದರ್ಶಿ ಮೂಲಕ ರೇವಣ್ಣ ಅವರಿಗೆ ಸಮನ್ಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ. ಹೊಳೆನರಸೀಪುರ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಆದ ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ, ರೇವಣ್ಣ ಅವರಿಗೆ ಸಮನ್ಸ್‌ ಮರು ಜಾರಿಗೆ ಆದೇಶಿಸಿದ್ದು ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ