ಸಂಕ್ರಾಂತಿ ನಂತ್ರ ಬೇರೆ ಪಕ್ಷದ ನಾಯಕರು ಜೆಡಿಎಸ್‌ಗೆ ಸೇರ್ಪಡೆ: ಶರವಣ

ಶನಿವಾರ, 10 ಡಿಸೆಂಬರ್ 2016 (18:37 IST)
ಸಂಕ್ರಾಂತಿಯ ನಂತರ ಬೇರೆ ಪಕ್ಷದ ನಾಯಕರು ಜೆಡಿಎಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಶರವಣ ಹೊಸ ಬಾಂಬ್ ಸಿಡಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಾದ್ಯಂತ ಏಕಾಏಕಿ 500, 1000 ಮುಖಬೆಲೆಯ ನೋಟ್ ಬ್ಯಾನ್ ಮಾಡಿರುವುದರಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸುತ್ತಿದ್ದರೂ ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದರು.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ, ಕೇವಲ 24 ಘಂಟೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಶರವಣ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ