ಸಿದ್ದರಾಮಯ್ಯ ಬಳಿಕ ಕರ್ನಾಟಕದ ಮುಂದಿನ ಸಿಎಂ ಇವರೇ: ಯಾರು ನೀವೇ ನೋಡಿ

Sampriya

ಸೋಮವಾರ, 6 ಜನವರಿ 2025 (17:49 IST)
Photo Courtesy X
ರಾಯಚೂರು: ಈಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ರಹಸ್ಯ ಸಭೆ ಬೆನ್ನಲ್ಲೇ 2028ಕ್ಕೆ ನಾನೇ ಸಿಎಂ ಅಭ್ಯರ್ಥಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

ರಾಯಚೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಅವಧಿಗೆ ಮುಖ್ಯಮಂತ್ರಿಗಳು ಇದ್ದಾರೆ. ಈ ಅವಧಿಗೆ ಸಿಎಂ ಆಗಲು ಬರುವುದಿಲ್ಲ. ಮುಂದಿನ ಅವಧಿಗೆ ನಾನು ಸಿಎಂ ಆಕಾಂಕ್ಷಿ ಎನ್ನುವ ಮೂಲಕ ಈಗಲೇ ಸಿಎಂ ಕುರ್ಚಿಯನ್ನು ಬುಕ್ ಮಾಡಿದ ಹಾಗೇ ಹೇಳಿಕೊಂಡಿದ್ದಾರೆ.

ಇನ್ನೂ ಈಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅನುಪಸ್ಥಿತಿಯಲ್ಲಿ ರಹಸ್ಯ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಲ್ಲರೂ ಕೂಡಿಯೇ ಸಭೆ ಮಾಡಿದ್ದು. ಅದು ಊಟದ ಸಲುವಾಗಿ ನಡೆದ ಸಭೆ. ಈ ವೇಳೆ ರಾಜಕೀಯ ಚರ್ಚೆಯನ್ನು ಮಾಡಿಲ್ಲ ಎಂದು ಸ್ಪಷ್ಟನೆ  ನೀಡಿದರು.

ರಾಜ್ಯದಲ್ಲಿ 60% ಕಮಿಷನ್ ಸರ್ಕಾರವಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ಅವರೆಲ್ಲ ಆರೋಪ ಮಾಡುತ್ತಾರೆ. ಅದನ್ನು ಸಾಬೀತು ಮಾಡಬೇಕು. ಸುಮ್ಮನೇ ಹೇಳುವುದರಿಂದ ಏನೂ ಆಗುವುದಿಲ್ಲ ಎಂದು ತಿರುಗೇಟು ನೀಡಿದರು.

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಒತ್ತಾಯ ವಿಚಾರವಾಗಿ, ಅವರ ಆಪ್ತನ ಹೆಸರು ಇದೆ. ಈಶ್ವರಪ್ಪನದ್ದು ನೇರವಾಗಿ ಪತ್ರದಲ್ಲಿ ಹೆಸರು ಇತ್ತು. ಆಪ್ತರು, ಪಿಎಗಳ ಹೆಸರು ಇದ್ರೆ ಸಚಿವರು ನೇರವಾಗಿ ಹೊಣೆಗಾರರು ಆಗಲ್ಲ. ಈ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ