ಇದರಲ್ಲಿ ಹೆಚ್.ಕೆ.ಪಾಟೀಲ್, ಡಾ.ಜಿ.ಪರಮೇಶ್ವರ್ ಹೆಸರು ಕೇಳಿಬಂದಿದ್ದು, ಕಳೆದ ಬಾರಿ ಇವರು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದರು.
ಹಾಗೇ ವಿಧಾನಸಭೆಯ ಮಾಜಿ ಸ್ಪೀಕರ್ ಆಗಿರೋ ರಮೇಶ್ ಕುಮಾರ್ ಹೆಸರು ಪ್ರಸ್ತಾಪಿಸಲಾಗಿದೆ ಎನ್ನಲಾಗಿದೆ. ಹಿರಿತನ, ಅನುಭವದ ಕಾರಣ ರಮೇಶ್ ಕುಮಾರ್ ವಿಪಕ್ಷ ನಾಯಕರಾದರೆ ಸಿದ್ದರಾಮಯ್ಯ ಅವರೇ ಆದಂತೆ ಆಗುತ್ತದೆ ಎಂಬ ಚರ್ಚೆ ಇದೀಗ ರಾಜಕೀಯ ವಲಯದಲ್ಲಿ ನಡೆಯುತ್ತಿದೆ ಎನ್ನಲಾಗಿದೆ.