ಬೆಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ ಕರ್ನೂಲ್ ಬಸ್ ದುರಂತ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಸಾರಿಗೆ ಇಲಾಖೆ ಸಾರಿಗೆ ಬಸ್‌ಗಳಲ್ಲಿ ಕೆಲ ನಿಯಮಗಳನ್ನ ಕಡ್ಡಾಯಗೊಳಿಸಿ ಸೂಚಿಸಿದ್ದಾರೆ.
ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್‌ಗಳಲ್ಲಿ ಕೆಲ ನಿಯಮಗಳನ್ನ ಕಡ್ಡಾಯಗೊಳಿಸಿದ್ದಾರೆ.
ಇನ್ನೂ ಪ್ರಮುಖವಾಗಿ ಬಸ್‌ಗಳಲ್ಲಿ ಬೆಂಕಿ ಸ್ಪರ್ಶಕ್ಕೆ ಉರಿಯುವ ವಸ್ತುಗಳನ್ನು ಸಾಗಣಿಕೆ ಮಾಡುವಂತಿಲ್ಲ. ಅದಲ್ಲದೆ ಯಾವುದೇ ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ಹೋಗಬಾರದು. ಎಲ್ಲಾ ಎಸಿ ಬಸ್‌ಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿದ್ದು, ಇದರಿಂದ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಬಳಸಲು ಸಹಾಯವಾಗಲಿದೆ.
ಅಲ್ಲದೇ ಲಗೇಜ್ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ನೀಡಬಾರದು. ಬಸ್ಸುಗಳ ನವೀಕರಣ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಗಿದೆ.
ಅದಲ್ಲದೆ ಬಸ್‌ಗಳಲ್ಲಿ ಸುರಕ್ಷತಾ ಆಡಿಟ್ ಪರಿಶೀಲನೆಗೆ ತಂಡಗಳನ್ನು ರಚಿಸಿ, ಬಸ್ ಗಳಲ್ಲಿ ಯಾವುದೇ ನೂನ್ಯತೆ ಕಂಡುಬಂದರೂ ಕಠಿಣ ಕ್ರಮಕ್ಕೆ ಆದೇಶಕ್ಕೆ ಸೂಚನೆ ನೀಡಿದ್ದಾರೆ.
ಇದ್ರ ನಡುವೆ ನಿನ್ನೆ ಹಾಗೂ ಇಂದು ರಾಜ್ಯ ಸಾರಿಗೆ ಅಧಿಕಾರಿಗಳು ಹಾಗೂ ಟ್ರಾಫಿಕ್ ಪೊಲೀಸ್ರು, ಬೆಂಗಳೂರಿನಿಂದ ಹೋಗುವಂತ ಎಲ್ಲಾ ಬಸ್ಸುಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ.
ಮೆಜೆಸ್ಟಿಕ್ ನಲ್ಲಿ ಖಾಸಗಿ ಎಸಿ ಬಸ್ ಗಳ ಪರಿಶೀಲನೆ ನಡೆಸಿ, ಡ್ರೈವರ್ ಲೈಸೆನ್ಸ್, ಬಸ್ ಗಳ ದಾಖಲೆ ಚೆಕ್ ಮಾಡುತ್ತಿದ್ದಾರೆ.