ರಾಹುಲ್ ಭೇಟಿ ಬಳಿಕ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ

ಮಂಗಳವಾರ, 27 ಮಾರ್ಚ್ 2018 (19:10 IST)
ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿ ಹೋದ ಮೇಲೆ ಶ್ರೀರಂಗಪಟ್ಟಣ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಈ ಘಟನೆ ನಡೆದದ್ದು, ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಮೂಲ ಕಾಂಗ್ರೆಸ್ಸಿಗರ ಕಡೆಗಣನೆ ಮಾಡಲಾಗಿದೆ ಎಂಬ ಕಾರಣಕ್ಕೆ ಭಿನ್ನಮತ ಸ್ಪೋಟಗೊಂಡಿದೆ. 
ವೇದಿಕೆಗೂ ಹತ್ತಿಸದೇ ಕಡೆಗಣನೆ ಮಾಡಲಾಗಿದೆ ಎಂದು ಕೆಲವು ಮುಖಂಡರು ದೂರಿದ್ದಾರೆ. ಇಂದು ನಡೆದ ಕಾಂಗ್ರೆಸ್ ಸಭೆಯಲ್ಲಿ ಮೂಲ ಕಾಂಗ್ರೆಸ್ಸಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 
 
ಜೆಡಿಎಸ್ ನಿಂದ ಬಂದಿರುವ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡರನ್ನು ವೇದಿಕೆಗೆ ಹತ್ತಿಸಿದ್ದಕ್ಕೆ ಈ ಆಕ್ರೋಶ ವ್ಯಕ್ತವಾಗಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜು, ಕಾಂಗ್ರೆಸ್ ಮಾಧ್ಯಮ ವಕ್ತಾರ ಪುಟ್ಟೇಗೌಡ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ