ಬೆಂಗಳೂರು: ಶಾಲಿನಿ ರಜನೀಶ್ ಅವರು ನೂತನ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಇವರ ಪತಿ ರಜನೀಶ್ ಗೋಯೆಲ್ ಅವರು ಕರ್ನಾಟಕ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರಾವಧಿ ಇದೇ ತಿಂಗಳಲ್ಲಿ ಮುಕ್ತಾಯವಾಗುತ್ತಿರುವುದರಿಂದ ಈ ಹೊಣೆಗಾರಿಯವನ್ನು ಇದೀಗ ಶಾಲಿನಿ ಅವರಿಗೆ ಸರ್ಕಾರ ವಹಿಸಲು ತೀರ್ಮಾನಿಸಿದೆ.
ಈ ಸಂಬಂಧ ಸಚಿವ ಎಚ್ ಕೆ ಪಾಟೀಲ್ ಅವರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಕೆ ಪಾಟೀಲ್, ಹಾಲಿ ಸಿಎಸ್ (ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ) ರಜನೀಶ್ ಗೋಯಲ್ 5 ದಿನದಲ್ಲಿ ನಿವೃತ್ತಿ ಆಗುತ್ತಾರೆ. ಹೀಗಾಗಿ ನೂತನ ಸಿಎಸ್ ಆಗಿ ಶಾಲಿನಿ ರಜನೀಶ್ರನ್ನು ನೇಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇದೇ ತಿಂಗಳ 31ಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಅಧಿಕಾರಾವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆ ನೂತನ ಕಾರ್ಯದರ್ಶಿ ಬಗ್ಗೆ ಭಾರೀ ಚರ್ಚೆಯಾಗುತ್ತಿತ್ತು.