ಗುಂಡಿನ ದಾಳಿ ಬೆನ್ನಲ್ಲೇ ಸಲ್ಮಾನ್ ಖಾನ್ ಮನೆ ಸುತ್ತಾ ಹೆಚ್ಚಿಸಿದ ಭದ್ರತೆ, ತನಿಖೆ ಚುರುಕು
"ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. 3 ಸುತ್ತಿನ ಗುಂಡಿನ ದಾಳಿಯ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಮುಂಬೈ ಪೊಲೀಸರ ಅಪರಾಧ ವಿಭಾಗವು ತನಿಖೆಗಾಗಿ ಸ್ಥಳಕ್ಕೆ ತಲುಪಿದೆ" ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ನಟನ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ವಿಧಿವಿಜ್ಞಾನ ತಂಡವೂ ಸ್ಥಳದಲ್ಲಿದೆ. ಆರೋಪಿಗಳನ್ನು ಗುರುತಿಸಲು ನಾವು ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.