ಬ್ರಿಗೇಡ್ ನಲ್ಲಿ ಗುರುತಿಸಿಕೊಂಡವರಿಗೆ ನ್ಯಾಯ ಸಿಗುವವರೆಗೆ ಬಿಡುವುದಿಲ್ಲ ಎಂದು ಈಶ್ವರಪ್ಪ ಪಟ್ಟು

ಭಾನುವಾರ, 5 ಮಾರ್ಚ್ 2017 (09:47 IST)
ಬೆಂಗಳೂರು: ಮತ್ತೊಮ್ಮೆ ರಾಜ್ಯ ಬಿಜೆಪಿಯಲ್ಲಿ ಈಶ್ವರಪ್ಪ ಭಿನ್ನಮತ ಹೊಗೆಯಾಡುವ ಲಕ್ಷಣ ಕಾಣುತ್ತಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಪದಾದಿಕಾರಿಗಳ ಕುರಿತು ತಮಗೆ ನೀಡಿದ ಭರವಸೆ ಹುಸಿಯಾದ ಹಿನ್ನಲೆಯಲ್ಲಿ ಈಶ್ವರಪ್ಪ ಅಸಮಧಾನಗೊಂಡಿದ್ದಾರೆ.


ದೆಹಲಿಯಲ್ಲಿ ವರಿಷ್ಠರ ಮುಂದೆ ನಡೆದ ಸಭೆಯಲ್ಲಿ ಬ್ರಿಗೇಡ್ ನ್ನು ಯಾವುದೇ ಕಾರಣಕ್ಕೂ ರಾಜಕೀಯ ಕಾರಣಕ್ಕೆ ಬಳಸಿಕೊಳ್ಳಬಾರದು ಎಂದು ವರಿಷ್ಠರು ತಾಕೀತು ಮಾಡಿದ್ದರು. ಅದರಂತೆ ನಡೆದುಕೊಂಡಿದ್ದೇವೆ.ಆದರೂ ಸಂಘಟನೆಯಲ್ಲಿ ಗುರುತಿಸಿಕೊಂಡವರಿಗೆ ನ್ಯಾಯ ಸಿಕ್ಕಿಲ್ಲ ಎನ್ನುವುದು ಈಶ್ವರಪ್ಪ ಕಿಡಿ.

ಬ್ರಿಗೇಡ್ ಪದಾದರಿಕಾರಿಗಳ ಅಮಾನತು ಆದೇಶ ಹಿಂಪಡೆಯಬೇಕು, ಅವರಿಗೆ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎನ್ನುವುದು ಈಶ್ವರಪ್ಪ ಬೇಡಿಕೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ