ಮತ್ತೆ ನಾಲ್ಕು ಜನರಲ್ಲಿ ಕೊರೊನಾ ವೈರಸ್ – ಒಟ್ಟು 14 ಸೋಂಕಿತರು
ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ನಾಲ್ಕು ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ 19 ವರ್ಷದ ವ್ಯಕ್ತಿ (ಪಿ-223); 55 ವರ್ಷದ ವ್ಯಕ್ತಿ (ಪಿ-225); 25 ವರ್ಷದ ಯುವಕ(ಪಿ-226)ನಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂವರೂ ಕೂಡ ಈಗಾಗಲೇ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಿ-150 ಜತೆ ಸಂಪರ್ಕಕ್ಕೆ ಬಂದಿದ್ದರು.
ಅದೇ ರೀತಿ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 38 ವರ್ಷದ ವ್ಯಕ್ತಿ (ಪಿ-224)ಯಲ್ಲೂ ಸೋಂಕು ದೃಢಪಟ್ಟಿದ್ದು, ಇವರು ಪಿ-128 ಜತೆ ಸಂಪರ್ಕಕ್ಕೆ ಬಂದಿದ್ದರು ಎಂದು ಆರೋಗ್ಯ ಇಲಾಖೆ ತಿಳಿಸಿದೆ.