ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ: ಸಂಚಾರ ಅಸ್ತವ್ಯಸ್ಥ

ಗುರುವಾರ, 3 ಮಾರ್ಚ್ 2016 (19:20 IST)
ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ಇಂದು ವಿಧಾನಸಭೆಗೆ ಮುತ್ತಿಗೆ ಹಾಕಲು ಸಾವಿರಾರು ಸಂಖ್ಯೆಯಲ್ಲಿದ್ದ ರೈತರು ಮೇಖ್ರಿ ವೃತ್ತವನ್ನು ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದರಿಂದ ಆಕ್ರೋಶಗೊಂಡ ರೈತರು ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಿದ್ದಲ್ಲದೇ ಹಲವು ವಾಹನಗಳನ್ನು ಜಖಂಗೊಳಿಸಿದ್ದಾರೆ.
 
ರೈತರ ಪ್ರತಿಭಟನೆ ಕಾವು ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರು ಎದುರಿಸುವಂತಾಗಿದೆ ದೇವನಹಳ್ಳಿಯ ರಾಣಿ ಕ್ರಾಸ್ ಬಳಿ ಸೇರಿದ್ದ ರೈತರ ಸಮೂಹ ಪೊಲೀಸರ ತಡೆಗಳನ್ನು ಮುರಿದು ಹಾಕಿ ಮುನ್ನುಗ್ಗಿದ ಪರಿಣಾವಾಗಿ ನಗರದ ಹಲವು ಭಾಗಗಳಲ್ಲಿ ಜನಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ.
 
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜನತೆ ಕುಡಿಯುವ ನೀರಿನಿಂದ ತತ್ತರಿಸುವಂತಾಗಿದೆ. ರಾಜ್ಯ ಸರಕಾರ ರೈತ ವಿರೋಧಿಯಾಗಿದ್ದು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ರೈತ ಸಂಘಧ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ದಾರೆ.
 
 ಪೊಲೀಸರ ಬಲ ಪ್ರಯೋಗಿಸಿ ರೈತರ ಪ್ರತಿಭಟನೆಯನ್ನು ತಡೆಯಲು ಸಾಧ್ಯವಾಗದು. ಕೂಡಲೇ ರಾಜ್ಯ ಸರಕಾರ ಶಾಶ್ವತ ಕುಡಿಯುವ ನೀರು ಯೋಜನೆ ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ರೈತ ಮುಖಂಡರು ಸರಕಾರಕ್ಕೆ ಒತ್ತಾಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ