ಹರಿಯಾಣ ಚುನಾವಣೆಯಲ್ಲಿ ಜನರು ನೀಡಿರುವ ತೀರ್ಪನ್ನು ಒಪ್ಪುತ್ತೇವೆ: ಡಿಕೆ ಶಿವಕುಮಾರ್‌

Sampriya

ಮಂಗಳವಾರ, 8 ಅಕ್ಟೋಬರ್ 2024 (17:17 IST)
ರಾಯಚೂರು: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿದ್ದೆವು. ಆದರೆ ಕಾಂಗ್ರೆಸ್‌ಗೆ ಹಿನ್ನಡೆಯಾಗಿದ್ದು, ಜನರು ನೀಡಿರುವ ತೀರ್ಪನ್ನು ಒಪ್ಪುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಜಿಲ್ಲೆಯ ಸಿಂಧನೂರಿನಲ್ಲಿ  ರೈತ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜತೆ  ಮಾತನಾಡಿದರು.

ಹರಿಯಾಣದಲ್ಲಿ ನಮ್ಮ ಸರ್ಕಾರ ಬಂದೇ ಬರುತ್ತದೆ ಎಂದು ನನಗೆ ಬಹಳ ಆತ್ಮವಿಶ್ವಾಸವಿತ್ತು. ಇನ್ನೂ ಕೂಡ ಫೈನಲ್ ರಿಸಲ್ಟ್ ಬಂದಿಲ್ಲ. ಜನರು ನಮಗೆ ತೀರ್ಪು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಹಿನ್ನಡೆ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದರು.

ಮುಡಾ ಹಗರಣದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಸಿದ್ದರಾಮಯ್ಯ ಅವರಿಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ. ಇನ್ನೂ ಈ ಸಂಬಂಧ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ