ಕಾಂಗ್ರೆಸ್ಸಿಗರಿಂದ ಅಹೋರಾತ್ರಿ ಧರಣಿ
ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಅಹೋರಾತ್ರಿ ಧರಣಿ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀ ರಂಗಪಟ್ಟಣ ತಾಲ್ಲೂಕು ಕಚೇರಿಯಲ್ಲಿ ಕಾಂಗ್ರೆಸ್ಸಿಗರು ಅಹೋ ರಾತ್ರಿ ಧರಣಿ ನಡೆಸಿದ್ದಾರೆ.
ದುರುದ್ದೇಶದಿಂದ ಜಾತಿ ಪ್ರಮಾಣ ಪತ್ರ ತಿರಸ್ಕರಿಸಲಾಗಿದೆ ಎಂದು ಆರೋಪ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ನಗುವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಬ್ರಹ್ಮಪುರ ಕೃಷ್ಣನಾಯಕ ಅವರಿಗೆ ಎಸ್ ಟಿ ಜಾತಿ ಪತ್ರ ನೀಡಲು ನಿರಾಕರಣೆ ಮಾಡಿರುವುದನ್ನು ಕಾಂಗ್ರೆಸ್ಸಿಗರು ಖಂಡಿಸಿದ್ದಾರೆ.
ಜ.28ರಂದು ಹಾ.ಉ.ಸ.ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಜೆಡಿಎಸ್ ನವರ ಒತ್ತಡದಿಂದ ಜಾತಿ ಪ್ರಮಾಣ ಪತ್ರ ನೀಡಲು ನಿರಾಕರಣೆ ಮಾಡಲಾಗುತ್ತಿದೆ ಎಂಬ ದೂರು ಕೇಳಿಬಂದಿದೆ.