ಎಐಸಿಸಿ ಕೇಂದ್ರ ಚುನಾವಣಾ ಸಮಿತಿ ಮರುರಚನೆ ಕೆಜೆ ಜಾರ್ಜ್‌ಗೆ ಸ್ಥಾನ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 16 ಸದಸ್ಯರನ್ನು ಒಳಗೊಂಡ ಕೇಂದ್ರ ಚುನಾವಣಾ ಸಮಿತಿಯನ್ನು ಮರು ರಚಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಆದೇಶ ಹೊರಡಿಸಿದ್ದಾರೆ. ರಾಜ್ಯ ಮತ್ತು ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಅಂತಿಮ ಆಯ್ಕೆ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕಾಂಗ್ರೆಸ್ ನೂತನ ಚುನಾವಣಾ ಸಮಿತಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ 16 ಸದಸ್ಯರನ್ನು ಒಳಗೊಂಡಿದೆ.ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಂಬಿಕಾ ಸೋನಿ ಮತ್ತು ಕೆಸಿ ವೇಣುಗೋಪಾಲ್ ಅವರನ್ನು ಸಹ ಕೇಂದ್ರ ಚುನಾವಣಾ ಸಮಿತಿಯಲ್ಲಿ ಸೇರಿಸಲಾಗಿದ್ದು, ಮನಮೋಹನ್ ಸಿಂಗ್, ಆಂಟನಿ, ಗಿರಿಜಾ ವ್ಯಾಸ್, ಜನಾರ್ದನ್ ದ್ವಿವೇದಿ, ಮುಕುಲ್ ವಾಸ್ಟಿಕ್, ಎಂ ವೀರಪ್ಪ ಮೊಯ್ಲಿ ಮತ್ತು ಮೊಕ್ಸಿನಾ ಕಿದ್ವಾಯಿ ಅವರಿಗೆ ಈ ಭಾರಿ ಅವಕಾಶ ನೀಡಲಾಗಿದೆ.