ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 11ರವರೆಗೆ ಹೆಚ್ಚು ಮಳೆ ಸುರಿಯುವ ಮುನ್ಸೂಚನೆ ಇರುವುದರಿಂದ ಯೆಲ್ಲೊ ಅಲರ್ಟ್ ಮುಂದುವರಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಅ. 9ರ ನಂತರ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ ರಾಜ್ಯ ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ.19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್: ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಒಳನಾಡಾದ ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಬೀದರ್, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.