ಮೋದಿಯವರಿಂದ ಏರ್ ಶೋ ಉದ್ಘಾಟನೆ

ಗುರುವಾರ, 8 ಡಿಸೆಂಬರ್ 2022 (13:06 IST)
ಬೆಂಗಳೂರು : 2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಪ್ರಧಾನಿ ಮೋದಿಯವರು ಏರ್ ಶೋಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಾಲಿನ್ಸ್ ಏರೋಸ್ಪೇಸ್ ಗ್ಲೋಬಲ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ನ್ನು ಉದ್ಘಾಟಿಸಿ ಮಾತನಾಡಿದರು.

ಈ ಏರ್ ಶೋ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಏರೋಸ್ಪೇಸ್ ಸಂಶೋಧನಾ ಕೇಂದ್ರದ ಬಗ್ಗೆ, ವಿಮಾನಯಾನ, ವಿಮಾನ ಉತ್ಪಾದನಾ ರಂಗಗಳಲ್ಲಿನ ಅವಕಾಶಗಳು ಹಾಗೂ ಸಾಧ್ಯತೆಗಳ ಬಗ್ಗೆ ಬೆಳಕು ಚೆಲ್ಲಬೇಕು. ಏರ್ ಶೋ ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ