ಇಂದಿನಿಂದ ಬೆಂಗಳೂರಿನಲ್ಲಿ ಏರ್ ಶೋ 2019ಕ್ಕೆ ಚಾಲನೆ

ಬುಧವಾರ, 20 ಫೆಬ್ರವರಿ 2019 (10:33 IST)
ಬೆಂಗಳೂರು : ಇಂದಿನಿಂದ ಬೆಂಗಳೂರಿನ ಯಲಹಂಕ ವೈಮಾನಿಕ ವಾಯುನೆಲೆಯಲ್ಲಿ ಏಷ್ಯಾದ ಅತಿದೊಡ್ಡ, ಪ್ರತಿಷ್ಠಿತ `ಏರೋ ಇಂಡಿಯಾ 2019' 12 ನೇ ಆವೃತ್ತಿಗೆ ಚಾಲನೆ ನೀಡಲಾಗಿದೆ.


ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ಇಂಡಿಯನ್ ಏರೋಸ್ಪೇಸ್ ಟೇಕಿಂಗ್ ಆಫ್’ ಪುಸ್ತಕ  ಬಿಡುಗಡೆ ಮಾಡುವುದರ ಮೂಲಕ ಏರೋ ಇಂಡಿಯಾಗೆ ಚಾಲನೆ ನೀಡಿದ್ದಾರೆ. ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಹೆಚ್‌ಎಎಲ್, ಡಿಆರ್ ಡಿಒ , ದೇಶದ ಮೂರು ಸೇನಾ ಪಡೆಗಳು ಹಿರಿಯ ಅಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದಾರೆ.


ಅಮೆರಿಕಾ, ಇಸ್ರೇಲ್, ರಷ್ಯಾ, ಸ್ಪೀಡನ್ ಇಟಲಿ, ಫ್ರಾನ್ಸ್, ಇಂಗ್ಲೆಂಡ್, ಸಿಂಗಾಪುರ, ಯುಎಇ, ಕೆನಡಾ, ಡೆಕ್ ರಿಪಬ್ಲಿಕ್, ದಕ್ಷಿಣ ಕೋರಿಯಾ, ಆಸ್ಟ್ರೇಲಿಯಾ ಸೇರಿದಂತೆ ಸುಮಾರು 30 ಕ್ಕೂ ಹೆಚ್ಚು ರಾಷ್ಟ್ರಗಳು ಏರೋ ಇಂಡಿಯಾದಲ್ಲಿ ರಕ್ಷಣಾ ವಲಯ ಮತ್ತು ನಾಗರೀಕ ವಿಮಾನಯಾನ ವಲಯ ಹಾಗೂ ಮಿಲಿಟರಿ ಕ್ಷೇತ್ರದ ತಂತ್ರಜ್ಞಾನಗಳನ್ನು ಪ್ರದರ್ಶಿಸಲಿವೆ.


ಫೆ. 20 ರಿಂದ 24 ರ ವರೆಗೆ ಐದು ದಿನಗಳ ಕಾಲ ಬೆಳಗ್ಗೆ 10 ರಿಂದ 12 ಹಾಗೂ ಮಧ್ಯಾಹ್ನ 2 ರಿಂದ 5.30 ರ ವರೆಗೆ ವೈಮಾನಿಕ ಪ್ರದರ್ಶನ ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ