ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

ಸೋಮವಾರ, 13 ಸೆಪ್ಟಂಬರ್ 2021 (22:45 IST)
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 
ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ.
 
ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ತನಕ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 
 
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬೇರೆ ಜಿಲ್ಲೆಗಳಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
 
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಒಂದು ವಾರದಿಂದ ಮಳೆ ಸುರಿಯುತ್ತಲೇ ಇದೆ. ಹಾಗೂ ಉತ್ತರ ಕರ್ನಾಟಕದ ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ