ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

ಶುಕ್ರವಾರ, 12 ನವೆಂಬರ್ 2021 (21:12 IST)
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ತಮಿಳುನಾಡಿನಾದ್ಯಂತ ಭಾರಿ ಮಳೆ ಯಾಗುತ್ತಿದ್ದು, ಅದರ ಪರಿಣಾಮ ಮಹಾನಗರ ಬೆಂಗಳೂರಿಗೆ ತಟ್ಟಿದೆ.
ಬುಧವಾರ ರಾತ್ರಿಯಿಂದ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗುತ್ತಿದ್ದು ರಾಜಧಾನಿ ಜನತೆ ಹೈರಾಣಾಗಿದ್ದಾರೆ. ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
13 ಜಿಲ್ಲೆಗಳಿಗೆ ಹೈ ಅಲರ್ಟ್​​ ಘೋಷಣೆ:
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಕೊಪ್ಪಳ, ಚಿತ್ರದುರ್ಗ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು ಸೇರಿ 13 ಜಿಲ್ಲೆಗಳಲ್ಲಿ ಜಿಟಿ ಜಟಿ ಮಳೆಯಾಗುವ ಸಾಧ್ಯತೆ ಇದ್ದು, ಹೈ ಅಲಟ್೯ ಘೋಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ