ನವೆಂಬರ್ 22 ರಂದು ವಿಮಾನ ನಿಲ್ದಾಣ ಲೋಕಾರ್ಪಣೆ

ಶನಿವಾರ, 16 ನವೆಂಬರ್ 2019 (17:14 IST)
ನವೆಂಬರ್ 22 ರಂದು  ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಸಚಿವರು ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಸೇರಿದಂತೆ ಕೇಂದ್ರ ವಿಮಾನಯಾನ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರದಮದಲ್ಲಿ ಯಾವುದೇ ಲೋಪವಾಗದಂತೆ ಜಿಲ್ಲಾಡಳಿತ ಮತ್ತು ಏರ್‍ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅಧಿಕಾರಿಗಳು ಸಾಂಘಿಕವಾಗಿ ಕಾರ್ಯನಿರ್ವಹಿಸುವಂತೆ ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ ಅಧಿಕಾರಿಗಳಿಗೆ ತಿಳಿಸಿದ್ರು.

ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಕರೆದ ಸಭೆಯಲ್ಲಿ ಮಾತನಾಡಿದರು.

ಏರ್‍ಪೋರ್ಟ್ ಆವರಣದಲ್ಲಿ ಕಾರ್ಯಕ್ರಮ ನಡೆಯುತ್ತಿರುವುದರಿಂದ ಡಿಜಿಸಿಎ ನಿಯಮಾನುಸಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಉದ್ಘಾಟನಾ ಕಾರ್ಯಕ್ರಮದ ವೇದಿಕೆ ಸೇರಿದಂತೆ ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆ ಮಾಡಬೇಕು. ಶಿಷ್ಟಾಚಾರದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ಆಮಂತ್ರಣ ಪತ್ರಿಕೆ ಮುಂಚಿತವಾಗಿ ತಲುಪಿಸಬೇಕು ಎಂದರು.  


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ