ವಾಯುಭಾರ ಕುಸಿತ ; ಕರಾವಳಿಗೆ ಕಡಿಮೆಯಾದ ಮಳೆ ಭೀತಿ

ಸೋಮವಾರ, 28 ಫೆಬ್ರವರಿ 2022 (21:14 IST)
ದಕ್ಷಿಣ ಹಿಂದೂ ಮಹಾಸಾಗರದಲ್ಲಿ ಉಂಟಾದ ತೀವ್ರ ಚಂಡಮಾರುತದ ಪರಿಣಾಮವಾಗಿ ಬಂಗಾಳಕೂಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ದುರ್ಬಲ ಅಥವಾ ಶಿಥಿಲಗೊಳ್ಳುತ್ತಲಿದ್ದು ನಿರೀಕ್ಷೆಗಿಂತ ಕಡಿಮೆ ಮಳೆಯಾಗುವ ಮುನ್ಸೂಚೆನೆ ಇದೆ. 
ತಮಿಳುನಾಡಿನ ಕರಾವಳಿ ಭಾಗಗಳಲ್ಲಿ ಮಾತ್ರ ಭಾರಿ ಮಳೆಯ ಮುನ್ಸೂಚೆನೆ ಇದೆ. ಉಳಿದ ತಮಿಳುನಾಡು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 
ಕರ್ನಾಟಕಕ್ಕೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಇದರ ಪ್ರಭಾವದಿಂದ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣತೆ ಮತ್ತು ತೇವಾಂಶ ಹೆಚ್ಚಾಗಿ ಒಂದೆರಡು ದಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. ಬದಲಾಗಬಹುದು. ನೋಡೋಣ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ