ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಮದ್ಯ ಬೆಲೆ ಏರಿಕೆ ಸಾಧ್ಯತೆ

Krishnaveni K

ಶನಿವಾರ, 18 ಮೇ 2024 (10:13 IST)
ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಮದ್ಯಪ್ರಿಯರಿಗೆ ಶಾಕ್‍ ಕೊಡಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲು ತಯಾರಿ ನಡೆಸಿದೆ ಎನ್ನಲಾಗಿದೆ.

ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ತೀವ್ರ ಪ್ರಯತ್ನ ನಡೆಸುತ್ತಿದೆ. ಇದಕ್ಕಾಗಿ ಮದ್ಯ ಬೆಲೆ ಏರಿಕೆ ಮಾಡಲು ಮುಂದಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಆದಾಯ ತಂದುಕೊಡುವ ವಿಭಾಗದಲ್ಲಿ ಅಬಕಾರಿ ಇಲಾಖೆಯೂ ಒಂದು. ಹೀಗಾಗಿ ಮದ್ಯಬೆಲೆ ಏರಿಕೆಯಾಗುವ ಸಾಧ‍್ಯತೆಯಿದೆ.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಮದ್ಯ ಬೆಲೆ ಕಡಿಮೆಯಿದೆ. ಹೀಗಾಗಿ ರಾಜ್ಯ ಸರ್ಕಾರ ಮದ್ಯ ಬೆಲೆ ಹೆಚ್ಚಿಸಲು ಚಿಂತನೆ ನಡೆಸಿದೆ. ಆದರೆ ಸದ್ಯಕ್ಕೆ ಲೋಕಸಭೆ ಚುನಾವಣೆ ಜಾರಿಯಲ್ಲಿದ್ದು, ಜನರ ಆಕ್ರೋಶ ವ್ಯಕ್ತವಾಗಬಹುದೆಂಬ ಕಾರಣಕ್ಕೆ ಕಾದು ನೋಡುವ ತಂತ್ರ ಅನುಸರಿಸಲಿದೆ.

ಆದರೆ ಲೋಕಸಭೆ ಚುನಾವಣೆ ಮುಗಿದ ಬಳಿಕ ಬೆಲೆ ಏರಿಕ ಖಂಡಿತಾ ಎನ್ನಲಾಗಿದೆ. ಕೆಲವು ದುಬಾರಿ ಬೆಲೆ ಮದ್ಯದ ಬೆಲೆಯನ್ನು ಹೆಚ್ಚಿಸಲಿದೆ. ಸದ್ಯಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಮಾತ್ರವಿದೆ. ಮುಂದೆ, ಚುನಾವಣೆ ಬಳಿಕ ಬೆಲೆ ಏರಿಕೆಗೆ ಅನುಮೋದನೆ ನೀಡಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ