ಕರಾವಳಿ, ಮಲೆನಾಡಿನಲ್ಲಿ ಎಲ್ಲೊ ಅಲರ್ಟ್
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಮುಂದುವರೆಯಲಿದೆ. ಹೀಗಾಗಿ, ಆಗಸ್ಟ್ 25ರವರೆಗೆ ಯೆಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜೊತೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇನ್ನು 3 ದಿನ ಯೆಲೋ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ ಇಂದಿನಿಂದ 3 ದಿನ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇಂದಿನಿಂದ ಕರ್ನಾಟಕದಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಗೋವಾ, ಕೊಂಕಣ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿಯೂ ಸತತವಾಗಿ ಮಳೆ ಸುರಿಯುತ್ತಿದೆ.