ಬೆಂಗಳೂರು : ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಚಂದ್ರಯಾನ-3ರ ನೌಕೆಯನ್ನು ಉಡಾವಣೆ ಮಾಡಿ ಯಶಸ್ವಿಯಾಗಿ ಕಕ್ಷೆಗೆ ಸೇರ್ಪಡೆ ಮಾಡಿದ ಇಸ್ರೋ ಸಂಸ್ಥೆಯನ್ನು ಹಾಗೂ ಬಾಹ್ಯಾಕಾಶ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಮೆಲ್ಲರ ಕನಸು, ನಿರೀಕ್ಷೆಗಳು ಚಂದ್ರನೆಡೆಗೆ ಸಾಗುತ್ತಿವೆ. ಇಡೀ ದೇಶವೇ ಹೆಮ್ಮೆಪಡುತ್ತದೆ. 45 ದಿನಗಳ ಐತಿಹಾಸಿಕ ಚಂದ್ರಯಾನ-3 ಯಶಸ್ವಿಯಾಗಿ ಆರಂಭವಾಗಿದೆ.
ಅಪರಾಹ್ನ 2.35ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಚಂದಿರನ ಅಂಗಳಕ್ಕೆ ನೌಕೆಯನ್ನು ಉಡ್ದಯನ ಮಾಡಿದ ಇಸ್ರೋ, ಈ ಪ್ರಯತ್ನದಲ್ಲಿ ಸಂಪೂರ್ಣ ಯಶಸ್ಸು ಸಾಧಿಸಲಿದೆ ಎಂಬ ವಿಶ್ವಾಸ ನನ್ನದು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.