ಮೇಯರ್ ಸ್ಥಾನ ನೀಡಿ ಇಲ್ಲಾಂದ್ರೆ ಮೈತ್ರಿ ಖತಂ: ಕಾಂಗ್ರೆಸ್‌ಗೆ ಕುಮಾರಸ್ವಾಮಿ ವಾರ್ನಿಂಗ್

ಬುಧವಾರ, 14 ಸೆಪ್ಟಂಬರ್ 2016 (15:27 IST)
ಬಿಬಿಎಂಪಿ ಮೇಯರ್ ಆಯ್ಕೆ ವಿಚಾರದಲ್ಲಿ ಕಳೆದ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದೇನೆ. ಈ ಬಾರಿ ಕಾಂಗ್ರೆಸ್ ಪಕ್ಷ ಜೆಡಿಎಸ್ ಪಕ್ಷಕ್ಕೆ ಮೇಯರ್ ಸ್ಥಾನ ಬಿಟ್ಟು ಕೊಡಲಿ. ಇಲ್ಲದಿದ್ದರೇ, ಮೇಯರ್ ಸ್ಥಾನ ನೀಡುವ ಪಕ್ಷಕ್ಕೆ ಬೆಂಬಲ ಸೂಚಿಸುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೆಡಿಎಸ್‌ನ ಉಚ್ಚಾಟಿತ ಶಾಸಕ ಜಮೀರ್ ಅಹ್ಮದ್ ಅಲ್ಪಸಂಖ್ಯಾತರ ಚಾಂಪಿಯನ್. ಕಳೆದ ಬಿಬಿಎಂಪಿ ಚುನಾವಣೆಯಲ್ಲಿ ಉಪಮೇಯರ್ ಸ್ಥಾನವನ್ನು ಅಲ್ಪಸಂಖ್ಯಾಂತರಿಗೆ ನೀಡಿ ಎಂದು ಜಮೀರ್ ಅಹ್ಮದ್‌ಗೆ ಸೂಚಿಸಿದ್ದೆ. ಆ ಸಂದರ್ಭದಲ್ಲಿ ಅಲ್ಪಸಖ್ಯಾಂತರಿಗೆ ಅವಕಾಶ ನೀಡಲಿಲ್ಲ. ಆದರೆ, ಈಗ ಅಲ್ಪಸಂಖ್ಯಾತರ ಪರವಾಗಿ ಮಾತನಾಡುತ್ತಿದ್ದಾರೆ. ಸುಳ್ಳು ಹೇಳುವುದನ್ನು ಬಿಟ್ಟು ಗೌರವಯುತವಾಗಿ ಬದುಕಿ ಎಂದು ಟಾಂಗ್ ನೀಡಿದ್ದಾರೆ.
 
ಅಧಿಕಾರಿಗಳಿಂದ ಪಡೆದುಕೊಂಡ ಮಾಹಿತಿ ಪ್ರಕಾರ, ಈವರೆಗೂ ಕಾವೇರಿ ನದಿಯಿಂದ ತಮಿಳುನಾಡಿಗೆ 40 ಟಿಎಂಸಿ ನೀರು ಬಿಡುಗಡೆ ಮಾಡಿದೆ. ಆದರೆ, ಕೇವಲ 27 ಟಿಎಂಸಿ ನೀರು ಬಿಡುಗಡೆ ಮಾಡಿದ್ದೇವೆ ಎಂದು ರಾಜ್ಯ ಸರಕಾರ ಸುಳ್ಳು ಮಾಹಿತಿ ನೀಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ನ್ಯಾಯಾಲಯವನ್ನು ಮೆಚ್ಚಿಸಲು ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗಿದೆ. ಕರ್ನಾಟಕವನ್ನು ಗಲಭೆಕೋರ ರಾಜ್ಯ ಎಂದು ಬಿಂಬಿಸಲು ತಮಿಳುನಾಡು ಸರಕಾರ ವ್ಯವಸ್ಥಿತವಾದ ಸಂಚು ರೂಪಿಸಿತ್ತು. ತಮಿಳುನಾಡಿನಲ್ಲಿ ನಡೆದ ಗಲಭೆಗಳಿಗೆ ಪ್ರಚಾರ ಸಿಗದಂತೆ ನೋಡಿಕೊಂಡಿದೆ ಎಂದು ಆರೋಪಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ