ಪ್ರಿಯಾಂಕ್ ಖರ್ಗೆ​ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ವಿವರಣೆ ಕೇಳಿದ ರಾಜ್ಯಪಾಲರು

Sampriya

ಸೋಮವಾರ, 2 ಸೆಪ್ಟಂಬರ್ 2024 (14:27 IST)
Photo Courtesy X
ಬೆಂಗಳೂರು: ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್​​ಗೆ ಪ್ರಭಾವ ಬಳಸಿ  ಸಿಎ ನಿವೇಶನವನ್ನು ಮಂಜೂರು ಮಾಡಿದ್ದಾರೆ ಎಂದು ರಾಜ್ಯದ ಸಚಿವ ಪ್ರಿಯಾಂಕ್​ ಖರ್ಗೆ  ಅವರ ವಿರುದ್ಧ ಆರೋಪಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್​ ಚಂದ್​​​ ಗೆಹ್ಲೋಟ್​ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.

ವಿಧಾನ ಪರಿಷತ್​ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಟ್ರಸ್ಟಿಗಳಾಗಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್​​ಗೆ ನಿಯಮ ಉಲ್ಲಂಘನೆಯ ಜೊತೆಗೆ ತರಾತುರಿಯಲ್ಲಿ ಕೆಐಎಡಿಬಿಯಿಂದ ಐದು ಎಕರೆ ಸಿ.ಎ ನಿವೇಶನ ಮಂಜೂರು ಮಾಡಲಾಗಿದೆ. ಪ್ರಿಯಾಂಕ್​ ಖರ್ಗೆ ಸಚಿವರಾಗಿದ್ದುಕೊಂಡು ಹೀಗೆ ಸರ್ಕಾರಿ ಸೌಲಭ್ಯ ಪಡೆದಿದ್ದು ಸರಿಯೇ ಎಂದು ದೂರಿನಲ್ಲಿ ಪ್ರಶ್ನಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್‌ ಖರ್ಗೆ, ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್​ದು ಒಂದು ಸಂವಿಧಾನ, ಕಾಂಗ್ರೆಸ್​​ಗೊಂದು ಸಂವಿಧಾನ. ನಮ್ಮ ವಿಚಾರದಲ್ಲಿ ಬಿಜೆಪಿ ಮೊದಲು 10 ಆರೋಪ ಮಾಡುತ್ತಿತ್ತು. ಎರಡನೇ ದಿನ ಐದು ಆರೋಪಗಳನ್ನು ಮಾಡಿದ್ದರು, ಈಗ ಸುಮ್ಮನಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಬಿಟ್ಟು ಬೇರೆ ಯಾರೂ ಏಕೆ ಮಾತನಾಡುತ್ತಿಲ್ಲ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಪ್ರಶ್ನಿಸಿದರು.

ದಲಿತರ ಜೊತೆ ಬಡಿದಾಡಿಸುವುದು ಕೋಮುವಾದ ಸೃಷ್ಟಿಸುವುದು, ಇದೆಲ್ಲ ಆರ್​​ಎಸ್​​ಎಸ್, ಬಿಜೆಪಿ ಸಂಚು ಎಂದು ವಾಗ್ದಾಳಿ ನಡೆಸಿದ ಅವರು, ಬಿವೈ ವಿಜಯೇಂದ್ರ, ಆರ್​.ಅಶೋಕ್ ಅವರು ನನ್ನ ವಿಚಾರದಲ್ಲಿ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ