ಹಾವೇರಿ ಜಿ.ಪಂ ಸದಸ್ಯನ ಮೈದುನನಿಂದ ಪೊಲೀಸರಿಗೆ ಧಮ್ಕಿ...

ಗುರುವಾರ, 21 ಜುಲೈ 2016 (09:53 IST)
ರಾಜ್ಯದಲ್ಲಿ ಕಾಂಗ್ರೆಸ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪೊಲೀಸ್ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ವಿರೋಧ ಪಕ್ಷಗಳ ಆರೋಪದ ಬೆನ್ನಲ್ಲೇ ಹಾವೇರಿ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಸದಸ್ಯಯೊಬ್ಬರ ಸಿಬ್ಬಂಧಿ ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಧಮ್ಕಿ ಹಾಕಿರುವ ಘಟನೆ ವರದಿಯಾಗಿದೆ.
 
ಅಂಚೆ ಕಛೇರಿಯಲ್ಲಿ ನಡೆದ ಪುಂಡಾಟಿಕೆ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಶಿಗ್ಗಾವಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದರು. ಇದರಿಂದ ಕೆಂಡಾಮಂಡಲವಾದ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಬಿ.ಎಂ.ಪಠಾಣ್ ಅವರ ಮೈದುನ ಯಾಸೀರ್‌ಖಾನ್ ಪಠಾಣ್ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಧಮ್ಕಿ ಹಾಕಿದ್ದಾನೆ ಎಂದು ಹೇಳಲಾಗುತ್ತಿದೆ.
 
ಕಳೆದ ಎರಡು ದಿನಗಳ ಹಿಂದೆ ನಗರದ ಅಂಚೆ ಕಛೇರಿಯಲ್ಲಿ ಕೆಲ ಪುಂಡರು ಪುಂಡಾಟಿಕೆ ಮಾಡಿದ್ದು, ಪೊಲೀಸರು ಪುಂಡರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಆರೋಪಿಗಳನ್ನು ಬಿಡಿಸಲು ಠಾಣೆಗೆ ಆಗಮಿಸಿದ ಬೊಮ್ಮನಹಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಬಿ.ಎಂ.ಪಠಾಣ್ ಅವರ ಮೈದುನ ಯಾಸೀರ್‌ಖಾನ್ ಪಠಾಣ್ ಪೊಲೀಸರಿಗೆ ಧಮ್ಕಿ ಹಾಕಿದ್ದಾನೆ.
 
ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ಸದಸ್ಯರು ಆರೋಪಿ ಯಾಸೀರ್ ಖಾನ್ ಬಂಧಿಸುವಂತೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ