ಬೆಂಗಳೂರು: ಸಹೋದರ ಡಿ ಕೆ ಸುರೇಶ್ ಪರ ಅಪಾರ್ಟ್‌ಮೆಂಟ್‌ನಲ್ಲಿ ಮತಯಾಚನೆ ವೇಳೆ ಬೆದರಿಕೆ ಆರೋಪದ ಹಿನ್ನಲೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬೆಂಗಳೂರಿನ ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಆರ್ಆರ್ ನಗರ ಅಪಾರ್ಟ್‌ಮೆಂಟ್ ಒಂದರಲ್ಲಿ ಮತಯಾಚನೆ ವೇಳೆ ಡಿಕೆಶಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮಾಹಿತಿ ನೀಡಿತ್ತು. ಇದರ ಬೆನ್ನಲ್ಲೇ ಮಾಹಿತಿ ಪಡೆದು ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಬಿಜೆಪಿ
ಡಿಕೆ ಶಿವಕುಮಾರ್ ಮತದಾರರನ್ನು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಕೆಲವು ದಿನಗಳ ಹಿಂದೆ ಟ್ವೀಟ್ ಮಾಡಿತ್ತು. ಅದರಲ್ಲಿ ಡಿಕೆಶಿ ಮಾತನಾಡುತ್ತಿರುವ ವಿಡಿಯೋವನ್ನೂ ಕೂಡ ಹಂಚಿಕೊಂಡಿತ್ತು.