ಯಲಹಂಕ ನಿವಾಸಿ ಮುರುಳಿ ( 26 ) ಹಲ್ಲೆಗೊಳಗಾದ ಆಟೋ ಚಾಲಕ.
ಈತ ನೀಡಿದ ದೂರಿನ ಅನ್ವಯ ಖಾಸಗಿ ಆಸ್ಪತ್ರೆಯ ವೈದ್ಯ ರಾಕೇಶ್ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.