ಅನೈತಿಕ ಚಟುವಟಿಕೆ ಆರೋಪ: ಮಸಾಜ್ ಪಾರ್ಲರ್ ಮೇಲೆ ರಾಮ್ ಸೇನಾ ಕಾರ್ಯಕರ್ತರಿಂದ ದಾಳಿ

Sampriya

ಗುರುವಾರ, 23 ಜನವರಿ 2025 (14:55 IST)
Photo Courtesy X
ಮಂಗಳೂರು: ಮಸಾಜ್ ಪಾರ್ಲರ್ ಒಂದರ ಮೇಲೆ ರಾಮ್ ಸೇನಾ ಕರ್ನಾಟಕದ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮಂಗಳೂರಿನಲ್ಲಿ  ನಡೆದಿದೆ.

ದಾಳಿ ವೇಳೆ ಮಸಾಜ್ ಪಾರ್ಲರ್‌ನಲ್ಲಿ ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್‍ನಲ್ಲಿ ಇದ್ದರು. ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆಯ ಹತ್ತು ಜನ ಕಾರ್ಯಕರ್ತರು ಬಿಜೈ ಕೆಎಸ್‍ಆರ್‌ಟಿಸಿ ಬಳಿಯ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ದಾಳಿ ನಡೆಸಿದ್ದಾರೆ.

ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪದ ಮೇರೆಗೆ ಸೆಲೂನ್‍ನ ಮೇಲೆ ದಾಳಿ ನಡೆಸಲಾಗಿದೆ.

ಈ ವೇಳೆ ವ್ಯಕ್ತಿಯ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಪೀಠೋಪಕರಣ ಧ್ವಂಸ
ಮಾಡಿದ್ದಾರೆ. ನಗರದಾದ್ಯಂತ ಇರುವ ಮಸಾಜ್ ಸೆಂಟರ್‌ಗಳನ್ನು ಮುಚ್ಚುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ