ಮೈತ್ರಿ ಸರ್ಕಾರ ವಿಶ್ವಾಸದ ಮತಯಾಚನೆ ಹಿನ್ನಲೆ; ಇಂದು ಬೆಂಗಳೂರಿನಲ್ಲಿ ರೆಡ್ ಅಲರ್ಟ್ ಘೋಷಣೆ

ಗುರುವಾರ, 18 ಜುಲೈ 2019 (13:31 IST)
ಬೆಂಗಳೂರು : ಇಂದು ಮೈತ್ರಿ ಸರ್ಕಾರ ವಿಶ್ವಾಸ ಮತಯಾಚನೆ ಹಿನ್ನಲೆಯಲ್ಲಿ ಇಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ಇಡೀ ಬೆಂಗಳೂರಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.



ಬರೋಬ್ಬರಿ 10 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ವಿಧಾನಸೌಧದ ಸುತ್ತಮುತ್ತ, ರಾಜಭವನದ ಸುತ್ತಮುತ್ತ ಬರೋಬ್ಬರಿ ಐದು ಸಾವಿರ ಪೊಲೀಸರನ್ನು ನಿಯೋಜನೆ ಮಾಡಿಲಾಗಿದೆ.

 

ಅಲ್ಲದೇ ಎಲ್ಲಾ ಪ್ರಮುಖ ರಾಜಕಾರಣಿಗಳ ಮನೆಗೆ ಬಂದೋಬಸ್ತ್ ಮಾಡಲಾಗಿದೆ. ಅದರಲ್ಲೂ ಅತೃಪ್ತ ಶಾಸಕರ ಮನೆಗಳಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ