ಮನೆಯಿಂದಲೇ ಆಸ್ತಿ ನೋಂದಣಿಗೆ ಅವಕಾಶ

geetha

ಬುಧವಾರ, 21 ಫೆಬ್ರವರಿ 2024 (19:00 IST)
ಬೆಂಗಳೂರು-ಬುಧವಾರ ವಿಧಾನಸಭೆಯಲ್ಲಿ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ-2024 ಅನ್ನು ಮಂಡಿಸಿ ಮಾತನಾಡಿದ ಅವರು ನೋಂದಣಿ ಕಚೇರಿಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸುವ ಸಲುವಾಗಿ ಎರಡು ಮಹತ್ವದ ತಿದ್ದುಪಡಿಗಳನ್ನು ತರಲಾಗಿದೆ.ಆ ಪೈಕಿ ಮೊದಲ ತಿದ್ದುಪಡಿ ಆಸ್ತಿ ಮಾರಾಟಗಾರರು ಹಾಗೂ ಕೊಳ್ಳುವವರು ಇಬ್ಬರ ಉಪಸ್ಥಿತಿಯೂ ಇಲ್ಲದೆ ತಾವಿದ್ದಲ್ಲಿದಂಲೇ ತಾಂತ್ರಿಕವಾಗಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಹಿಂದೆ ಉಪ ನೋಂದಣಾಧಿಕಾರಿ ಕಚೇರಿಗೆ ಎರಡೂ ಕಡೆಯವರ ಉಪಸ್ಥಿತಿ ಅನಿವಾರ್ಯವಾಗಿತ್ತು. ಹೀಗಾಗಿ ಸರ್ಕಾರಿ ಕಚೇರಿಯಲ್ಲಿ ಜನಸಂದಣಿ ಹೆಚ್ಚಾಗಿತ್ತು. ಎಲ್ಲರಿಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಅಸಾಧ್ಯವಾಗಿತ್ತು. ಹೀಗಾಗಿ ಜನಸಾಮಾನ್ಯರು ಅನಗತ್ಯವಾಗಿ ಉಪ ನೋಂದಣಾಧಿಕಾರಿ ಕಚೇರಿಗೆ ಓಡಾಡುವುದನ್ನು ತಪ್ಪಿಸುವ ಸಲುವಾಗಿ ತಾಂತ್ರಿಕ ನೋಂದಣಿಗೆ ಅಂಕಿತ ಹಾಕಲಾಗಿದೆ.
 
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ  ಕರ್ನಾಟಕ ಹೌಸಿಂಗ್ ಬೋರ್ಡ್, ಸ್ಲಂ ಬೋರ್ಡ್ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಂತಹ ನಂಬಿಕಾರ್ಹ ಮೂಲಗಳ ಸಹಾಯದಿಂದ ನಾಗರೀಕರು ತಾಂತ್ರಿಕವಾಗಿಯೇ ಆಸ್ತಿ ನೋಂದಣಿ ಮಾಡಿಕೊಳ್ಳಬಹುದು. ಈ ಹೊಸ ಮಾದರಿ ಈಗಾಗಲೇ ಮಹಾರಾಷ್ಟ್ರದಲ್ಲಿ ಯಶಸ್ವಿಯಾಗಿದ್ದು, ಕರ್ನಾಟಕದಲ್ಲೂಸಹ ಜನರಿಗೆ ಉತ್ತಮ ಆಡಳಿತ ನೀಡಲು ಸಹಕಾರಿಯಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ