ಹಿಜಾಬ್​ ಜೊತೆಗೆ ತಾಳಿ, ಕಾಲುಂಗರಕ್ಕೂ ಅವಕಾಶ

ಬುಧವಾರ, 15 ನವೆಂಬರ್ 2023 (16:45 IST)
ನವೆಂಬರ್​​ 18 ಮತ್ತು 19ರಂದು ವಿವಿಧ ನಿಗಮ ಮಂಡಳಿಗಳಿಗೆ ನಡೆಯಲಿರುವ ನೇಮಕಾತಿ ಪರೀಕ್ಷೆಗಳಿಗೆ ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ವಸ್ತ್ರ ಧರಿಸಿಕೊಂಡು ಬರುವಂತಿಲ್ಲ ಎಂಬ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುತ್ತೋಲೆ ಮುಸ್ಲಿಂ ಮಹಿಳಾ ಅಭ್ಯರ್ಥಿಗಳಲ್ಲಿ ಗೊಂದಲ ಮೂಡಿಸಿದೆ.

ಹಿಜಾಬ್​​ಗು ಅವಕಾಶ ಇಲ್ಲವೇ ಎಂಬ ಪ್ರಶ್ನೆ ಉದ್ಭವಿಸಿತ್ತು. ಇದೀಗ ಪ್ರಾಧಿಕಾರ ಈ ಕುರಿತು ಸ್ಪಷ್ಟನೆ ನೀಡಿದ್ದು, ಈ ಹಿಂದಿನಂತೆ ಪರೀಕ್ಷಾ ಕೊಠಡಿಯೊಳಗೆ ಹಿಜಾಬ್​ಗೆ ಅವಕಾಶ ನಿಡಲಾಗಿದೆ ಎಂದು ಹೇಳಿದೆ.ಹಿಂದೂ ಅಭ್ಯರ್ಥಿಗಳು ಧರಿಸುವ ತಾಳಿ ಮತ್ತು ಕಾಲುಂಗುರಗಳನ್ನು ಪರೀಕ್ಷಾ ಕೊಠಡಿಗಳಿಗೆ ನಿಷೇಧಿಸಿದಕ್ಕೆ ಬಲಪಂಥಿಯ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಇದರಿಂದ ಎಚ್ಚೆತ್ತ ಕೆಇಎ ತಾಳಿ ಮತ್ತು ಕಾಲುಂಗರಗಳನ್ನು ಹೊರತುಪಡಿಸಿ ಮಹಿಳೆಯರು ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ ಎಂದು ಹೇಳಿದೆ. ಪರೀಕ್ಷಾ ಸಭಾಂಗಣಗಳಲ್ಲಿ ಬ್ಲೂಟೂತ್ ಸಾಧನಗಳ ಬಳಕೆಯನ್ನು ತಡೆಗಟ್ಟುವ ಸಲುವಾಗಿ, ಕ್ಯಾಪ್​​ಗಳು ಅಥವಾ ಬಾಯಿ, ಕಿವಿ ಮತ್ತು ತಲೆಯನ್ನು ಮುಚ್ಚುವ ಬಟ್ಟೆ ಅಥವಾ ವಸ್ತುಗಳನ್ನು ನಿಷೇಧಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ