ಸೇರಿಗೆ ಸವಾಸೇರು, ಕಾಂಗ್ರೆಸ್ ಪಕ್ಷದಲ್ಲಿ ನಿಲ್ಲದ ಅಧಿಕಾರ ಹಂಚಿಕೆ ತಕರಾರು: ಆರ್‌ ಅಶೋಕ್

Sampriya

ಶನಿವಾರ, 7 ಡಿಸೆಂಬರ್ 2024 (17:55 IST)
ಬೆಂಗಳೂರು: ಅಧಿಕಾರ ಹಂಚಿಕೆ ಬಗ್ಗೆ ತಮ್ಮ ಹಾಗು ಸಿಎಂ ಸಿದ್ದರಾಮಯ್ಯ ಅವರ ನಡುವೆ ಒಪ್ಪಂದ ಆಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು ರಾಷ್ಟ್ರೀಯ ಮಾಧ್ಯಮವೊಂದರಲ್ಲಿ ಹೇಳಿಕೆ ಕೊಟ್ಟಾಗಿನಿಂದ ಕಾಂಗ್ರೆಸ್ ನಾಯಕರು ಸೇರಿಗೆ ಸವಾಸೇರು ಎಂದು ಪರಸ್ಪರ ಸವಾಲ್ ಎಸೆಯುವ ಬೀದಿ ಕಾಳಗ ನಿಲ್ಲುತ್ತಲೇ ಇಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ ಮಾಡಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಅಂತಹ ಯಾವುದೇ ಒಪ್ಪಂದ ಆಗಿಲ್ಲ ಎಂದಿರುವ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳು ಹೇಳಿದ ಮೇಲೆ ಅದೇ ಫೈನಲ್ ಎಂದು ಮಾರ್ಮಿಕವಾಗಿ ಮಾತಾಡಿದರು.


ಇತ್ತ ಗೃಹ ಸಚಿವ ಡಾ.ಪರಮೇಶ್ವರ್‌ ಅವರು ಅವರಿಬ್ಬರ ನಡುವೆ ಒಪ್ಪಂದ ಆಗಿದ್ದರೆ ನಾವೆಲ್ಲ ಯಾಕೆ ಎಂದು ಅಸಮಾಧಾನ ಹೊರಹಾಕಿದರು. ಈಗ ಮತ್ತೊಬ್ಬ ಹಿರಿಯ ದಲಿತ ನಾಯಕರು ಮತ್ತು ಸಚಿವರಾದ ಕೆಎಚ್‌ ಮುನಿಯಪ್ಪ
 ಅವರು ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ ಎಂದು ಡಿ.ಕೆ.ಶಿವಕುಮಾರ್ ಅವರ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಅಧಿಕಾರ ಹಂಚಿಕೆ ಒಪ್ಪಂದ ಆಗಿದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಕಾಂಗ್ರೆಸ್ ಪಕ್ಷ ಒಡೆದ ಮನೆಯಾಗಿರುವುದು ಮಾತ್ರ ಸತ್ಯ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ