ಮಾಲ್​ ಅಂಡ್​ ರೆಸ್ಟೋರೆಂಟ್​ಗಳಲ್ಲೂ ಅಂತರ

ಸೋಮವಾರ, 2 ಮೇ 2022 (17:54 IST)
ಚಿತ್ರಮಂದಿರಗಳು, ಮಾಲ್, ರೆಸ್ಟೋರೆಂಟ್, ಹೋಟೆಲ್ ಹಾಗೂ ಇತರ ವಾಣಿಜ್ಯ ಸಂಸ್ಥೆಗಳಿಗೆ ತೆರಳುವವರು ಮಾಸ್ಕ್ ಮತ್ತು ವ್ಯಕ್ತಿಗತ ಅಂತರದ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪಾಲಿಕೆ ಸೂಚಿಸಿದೆ. ಪ್ರವೇಶ ದ್ವಾರಗಳಲ್ಲಿ ಜನರ ದೈಹಿಕ ಉಷ್ಣಾಂಶಗಳನ್ನು ತಪಾಸಣೆ ನಡೆಸಲು ಸೂಚಿಸಲಾಗಿದೆ.

ರಾಜ್ಯದಲ್ಲಿ ರೂಪಾಂತರಿ BA.2.12 ಪತ್ತೆ, ಕೊರೊನಾ 4ನೇ ಅಲೆ ಆತಂಕ
 
ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಮೀಸಲು
 
ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್‌ಗಳಿಗೆ ಆಗಮಿಸುವ ಹೊರ ರೋಗಿಗಳಿಗೆ ಐಎಲ್‌ಐ ಹಾಗೂ ಸಾರಿ ಪರೀಕ್ಷೆ ಹಾಗೂ ಒಳರೋಗಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರ ಈ ಹಿಂದೆ ನೀಡಿದ ಆದೇಶದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಶೇ.10 ಹಾಸಿಗೆಯನ್ನು ಸೋಂಕಿತರ ಚಿಕಿತ್ಸೆಗೆ ಮೀಸಲಿಡಬೇಕು ಎಂದು ತಿಳಿಸಲಾಗಿದೆ. ಹಾಸಿಗೆ ಲಭ್ಯದ ಬಗ್ಗೆ ಪೋರ್ಟಲ್‌ನಲ್ಲಿ ದಾಖಲಿಸಲು ನಿರ್ದೇಶಿಸಲಾಗಿದೆ. ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಕೋವಿಡ್ ನಿಯಂತ್ರಣ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದು ವಿನಂತಿಸಿಕೊಳ್ಳಲಾಗಿದ್ದು, ಬೂಸ್ಟರ್ ಡೋಸ್ ಹಾಗೂ ಮಕ್ಕಳ ವ್ಯಾಕ್ಸಿನೇಷನ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ