ಫೆಂಗಲ್‌ ಚಂಡಮಾರುತ ಪ್ರಭಾವ ತಗ್ಗಿದರೂ ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

Sampriya

ಗುರುವಾರ, 5 ಡಿಸೆಂಬರ್ 2024 (14:49 IST)
ಬೆಂಗಳೂರು: ಫೆಂಗಲ್‌ ಚಂಡಮಾರುತದ ಪ್ರಭಾವ ತಗ್ಗಿದ್ದು, ರಾಜ್ಯದಲ್ಲಿ ಮಳೆ ತಗ್ಗಿದೆ. ಆದರೆ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನವೂ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ. ಇಂದು ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಮಂಜು ಆಳದಿಂದ ಮಧ್ಯಮವಾಗಿರುತ್ತದೆ.

ನಾಳೆಯೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ