ಅಂಬರೀಶ್ ಮೂಲತಃ ಜೆಡಿಎಸ್ ಪಕ್ಷದವರು: ಎಚ್.ಡಿ.ದೇವೇಗೌಡ

ಗುರುವಾರ, 23 ಜೂನ್ 2016 (17:25 IST)
ಮಾಜಿ ಸಚಿವ ಅಂಬರೀಶ್ ಮೂಲತಃ ಜೆಡಿಎಸ್ ಪಕ್ಷದವರು. ಶ್ರೀನಿವಾಸ್ ಪ್ರಸಾದ ನನ್ನ ಜೊತೆ ಕೆಲಸ ಮಾಡಿದವರು. ಈ ಪ್ರೀತಿಯಿಂದ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ ಹೊರತು ಬೇರೆ ಉದ್ದೇಶದಿಂದ ಅಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ವಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು, ರಾಜ್ಯ ರಾಜಕಾರಣ ಸಂಪೂರ್ಣವಾಗಿ ಹದಗೆಟ್ಟಿದ್ದು, ಅಭಿವೃದ್ಧಿ ಪರ ಕೆಲಸಗಳು ಕುಂಠಿತವಾಗುತ್ತಿದೆ ಎಂದು ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.  
 
ಬಿಹಾರ್ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರ ನಾಯಕತ್ವದಲ್ಲಿ ಮುಂದಿನ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಎಲ್ಲರೂ ಒಂದಾಗಿ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುತ್ತೇವೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ