ಕಲ್ಯಾಣ ಕರ್ನಾಟಕ ಭಾಗಕ್ಕೆ ಭಾರತ ಸಂವಿಧಾನದ ಆರ್ಟಿಕಲ್ 371(ಎ) ಗೆ ತಿದ್ದುಪಡಿ
ಕಲ್ಯಾಣ ಕರ್ನಾಟಕ ಭಾಗಕ್ಕೆ ಭಾರತ ಸಂವಿಧಾನದ ಆರ್ಟಿಕಲ್ 371(ಎ) ಗೆ ತಿದ್ದುಪಡಿ ತಂದು ವಿಶೇಷ ಸ್ಥಾನಮಾನ ಕಲ್ಪಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಇದರಿಂದ ಮೈಸೂರು ಕರ್ನಾಟಕ, ಕಿತ್ತೂರು ಕರ್ನಾಟಕ (ಉತ್ತರ ಕರ್ನಾಟಕ), ಕರಾವಳಿ ಮತ್ತು ಮಧ್ಯ ಕರ್ನಾಟಕ ಭಾಗಗಳಿಗೆ ಅನ್ಯಾಯವಾಗುತ್ತಿದೆ. ಈ ಭಾಗದಲ್ಲಿ ಶೈಕ್ಷಣಿಕ, ಉದ್ಯೋಗಾವಕಾಶಗಳು ಕಡಿಮೆಯಾಗುತ್ತಿದ್ದು, ಈ ವಲಯದಲ್ಲಿ ಅಸಮಾನತೆ ಕಂಡು ಬರುತ್ತಿದೆ ಅಂತ ಎನ್. ನಾಗರಾಜ ನಿವೃತ್ತ ಪೊಲೀಸ್ ಅಧೀಕ್ಷಕರು ಹಾಗೂ ಐಎಎಸ್ ಇನ್ನಿತರೆ ನಿವೃತ್ತ IAS ಅಧಿಕಾರಿಗಳು ಸರ್ಕಾರದ ವಿರುದ್ಧ ಕಿಡಿಕರಿದ್ದಾರೆ.