ಆದಿಚುಂಚನಗಿರಿಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ
ಭಾನುವಾರ, 13 ಆಗಸ್ಟ್ 2017 (12:19 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
ಮಠದ ನಿರ್ಮಲಾನಂದ ಶ್ರೀಗಳು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಮಠಕ್ಕೆ ಸ್ವಾಗತಿಸಿದರು. ಅಮಿತ್ ಶಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಸದಾನಂದಗೌಡ ಸೇರಿದಂತೆ ಹಿರಿಯ ಮುಖಂಡರು ಸಾಥ್ ನೀಡಿದರು.
ರಾಜ್ಯಕ್ಕೆ ಮೂರು ದಿನಗಳ ಭೇಟಿಗಾಗಿ ಆಗಮಿಸಿರುವ ಶಾ, ನಿನ್ನೆ ಬಿಜೆಪಿ ಪಕ್ಷದ ಹಲವಾರು ಸಭೆಗಳನ್ನು ನಡೆಸಿ ಮುಂಬರುವ ಚುನಾವಣೆಯ ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬಹುಮತ ಪಡೆದು ಸರಕಾರ ರಚಿಸಲೇಬೇಕು ಎನ್ನುವ ಗುರಿಯೊಂದಿಗೆ ಕಾರ್ಯನಿರ್ವಹಿಸುವಂತೆ ಅಮಿತ್ ಶಾ, ಪಕ್ಷದ ಮುಖಂಡರಿಗೆ ತಾಕೀತು ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.