ಆಪರೇಷನ್ ಹಸ್ತ ತಡೆಯಲು ಅಮಿತ್ ಶಾ ಎಂಟ್ರಿ?

ಬುಧವಾರ, 23 ಆಗಸ್ಟ್ 2023 (09:34 IST)
ಬೆಂಗಳೂರು : ಬಿಜೆಪಿ ಶಾಸಕರನ್ನ ಆಪರೇಷನ್ ಹಸ್ತದ ಮೂಲಕ ಸೆಳೆಯುವ ‘ಕೈ’ ಪ್ರಯತ್ನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿಯಾಗುವ ಸಾಧ್ಯತೆ ಇದೆ.

ಕಾಂಗ್ರೆಸ್ ಆಪರೇಷನ್ ಪ್ರಯತ್ನಕ್ಕೆ ಅಮಿತ್ ಶಾ ಅಡ್ಡಿಯಾಗುವ ಸಾಧ್ಯತೆ ಇದೆ. ಶಾಸಕ ಎಸ್.ಟಿ. ಸೋಮಶೇಖರ್ ಆಪರೇಷನ್ ಕಮಲಕ್ಕೆ ಒಳಗಾಗಬಹುದು ಎಂಬ ಅನುಮಾನಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ಆಗುವ ಸಾಧ್ಯತೆ ಇದೆ.

ಸೆಪ್ಟೆಂಬರ್ 2 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಾಸಕ ಎಸ್.ಟಿ. ಸೋಮಶೇಖರ್ ಭೇಟಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಶಾಸಕ ಎಸ್.ಟಿ. ಸೋಮಶೇಖರ್ ಸೆಪ್ಟೆಂಬರ್ 2 ರಂದು ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದ್ದು, ದೆಹಲಿಯಲ್ಲಿ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ