ಅಮಿತ್ ಶಾ ಬರುತ್ತಿರುವುದೇ ಇಲ್ಲಿನ ‘ಸಂಪತ್ತು’ ಕೊಂಡೊಯ್ಯುವುದಕ್ಕಾ : ಕಾಂಗ್ರೆಸ್

ಶುಕ್ರವಾರ, 3 ಮಾರ್ಚ್ 2023 (13:59 IST)
ಬೆಂಗಳೂರು : ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿ ಸುಮಾರು 8 ಕೋಟಿ ಸೀಜ್ ಮಾಡಿದೆ.
 
ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ನಾಯಕರು ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿರುವುದರ ಹಿಂದಿನ ಉದ್ದೇಶವೇನು ಎಂಬುದಾಗಿ ಪ್ರಶ್ನಿಸಿದೆ.

 “ನಾ ಖಾವುಂಗಾ, ನಾ ಖಾನೆದುಂಗಾ” ಎನ್ನುವ ನರೇಂದ್ರ ಮೋದಿ ಅವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ. ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ ಮೂರು ಬಾರಿ ಬರುತ್ತಿರುವಿರಾ? “ಶಬಾಷ್” ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ? ಕಮಿಷನ್ ಲೂಟಿಯ ಹಣ ಇಡಲು ಮನೆಗಳು ಸಾಲದೆ ಬಿಜೆಪಿಗರು ದೊಡ್ಡ ದೊಡ್ಡ ಗೋಡೌನ್ಗಳನ್ನೇ ಕಟ್ಟಿಸಿರುವಂತಿದೆ ಎಂದು ಕಾಂಗ್ರೆಸ್ ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ