ಭೇಟಿಗೆ ನಿರಾಕರಿಸಿ ನನ್ನ ಚುನಾವಣೆ ಸ್ಪರ್ಧೆಗೆ ಗ್ರೀನ್‌ ಸಿಗ್ನಲ್ ಕೊಟ್ಟ ಅಮಿತ್ ಶಾ: ಈಶ್ಚರಪ್ಪ

Sampriya

ಗುರುವಾರ, 4 ಏಪ್ರಿಲ್ 2024 (16:21 IST)
ಶಿವಮೊಗ್ಗ: ಕೇಂದ್ರ ಸಚಿವ ಅಮಿತ್‌ ಶಾ ಅವರು ನನ್ನ ಭೇಟಿಯನ್ನು ನಿರಾಕರಣೆ ಮಾಡುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ್ಯವಾಗಿ ಸ್ಪರ್ಧಿಸಲು ನನಗೆ ಗ್ರೀನ್‌ ಸಿಗ್ನಲ್ ಕೊಟ್ಟಿದ್ದಾರೆಂದು  ಬಿಜೆಪಿ  ಬಂಡಾಯ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳ ದಿಂದೆ ಕೇಂದ್ರ ಸಚಿವ ಅಮಿತ್ ಶಾ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ ವೇಳೆ ನನಗೆ ಕರೆ ಮಾಡಿ ದೆಹಲಿಗೆ ಬರುವಂತೆ ಹೇಳಿದ್ದರು. ಅವರರಿಗೆ ಗೌರವ ಕೊಟ್ಟು ಇಂದು ದೆಹಲಿಗೆ ಹೋಗಿದ್ದೆ. ಆದರೆ ಅವರು ಭೇಟಿಯಾಗದೆ ನಾನು ಸ್ಪರ್ಧೆ ಮಾಡುವುದಕ್ಕೆ ಅಸ್ತು ಎಂಬ ಸಂದೇಶವನ್ನು ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಕುಟುಂಬ ರಾಜಕಾರಣ ಬೆಳೆಯುತ್ತಿದ್ದು ಇದರಿಂದ ಅನೇಕ ಹಿಂದುತ್ವ ನಾಯಕರನ್ನು ಮೂಲೆ ಗುಂಪು ಮಾಡಲಾಗಿದೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಕಿತ್ತುಗೆಯುವಂತೆ ಶಾ ಬಳಿ ಈ ಹಿಂದೆಯೇ ಹೇಳಿದ್ದೆ. ನನ್ನ ಪ್ರಶ್ನೆಗಳಿಗೆ ಅವರ ಬಳಿ ಉತ್ತರ ಇರಲಿಲ್ಲ. ಹೀಗಾಗಿಯೇ ಅವರು ನನ್ನ ಮನವೊಲಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

ನಾನು ನನ್ನ ನಿರ್ಧಾರದಂತೆ, ಕಾರ್ಯಕರ್ತರು ಬೆಂಬಲಿಗರ ಅಪೇಕ್ಷೆಯಂತೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಇವನು ಚುನಾವಣೆಗೆ ನಿಲ್ಲೋದೇ ಸೂಕ್ತ ಎಂದು ಅವರಿಗೆ ಅನ್ನಿಸಿದೆ. ಅವರ ಅಪೇಕ್ಷೆಯಂತೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಅಮಿತ್ ಶಾ ಕರೆದಾಗ ಏನು ಕೇಳ್ತಾರೆ? ಏನು ಉತ್ತರ ಕೊಡಬೇಕು ಎಂದು ತಯಾರಿ ಆಗಿದ್ದೆ. ಅಮಿತ್ ಶಾ ತುಂಬಾ ಚಾಣಕ್ಷ ನಿರ್ಧಾರ ಕೈಗೊಂಡಿದ್ದಾರೆ. ಅವರ ನಿರ್ಧಾರ ಸ್ವಾಗತಿಸುತ್ತೇನೆ. ಅವರ ನಿರ್ಧಾರ ಅಭಿನಂದಿಸುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್‌ ಸ್ಪರ್ಧಿ ಗೀತಾ ಶಿವರಾಜ್‍ಕುಮಾರ್ ನನ್ನ ಸಹೋದರಿ ಇದ್ದ ಹಾಗೆ. ಅವರ ಬಗ್ಗೆ ಯಾವುದೇ ವಿರೋಧವಿಲ್ಲ. ಯಡಿಯೂರಪ್ಪ ಹಾಗೂ ಅವರ ಮಕ್ಕಳು ಹೊಂದಾಣಿಕೆ ರಾಜಕಾರಣ ಮಾಡುತ್ತಾರೆ. ಈ ಬಾರಿಯೂ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದಾರೆ. ಈ ಹೊಂದಾಣಿಕೆ ರಾಜಕಾರಣ ಕೊನೆಯಾಗಬೇಕು. ನನಗೆ ಮತದಾರರೇ ಸ್ಟಾರ್ ಪ್ರಚಾರಕರು ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ