ಅಮಿತ್ ಶಾ ಚುನಾವಣಾ ರಣತಂತ್ರ?

ಶನಿವಾರ, 11 ಫೆಬ್ರವರಿ 2023 (08:46 IST)
ಮಂಗಳೂರು : ಚುನಾವಣೆ ಸಮೀಪಿಸುತ್ತಿದ್ದಂತೆ ಕೇಸರಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಚಾಣಕ್ಯನ ಸಂಚಾರ ಆರಂಭಗೊಂಡಿದೆ.

ಪುತ್ತೂರಿನ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮದೊಂದಿಗೆ ಬಿಜೆಪಿಯ ರಣ ಕಹಳೆಯನ್ನೂ ಕೇಂದ್ರದ ಗೃಹ, ಸಹಕಾರಿ ಸಚಿವ ಅಮಿತ್ ಶಾ ಮೊಳಗಿಸಲಿದ್ದಾರೆ. ಪಕ್ಷದ ವರಿಷ್ಠರು ಬರುವ ಹಿನ್ನೆಲೆಯಿಂದ ಬಿಜೆಪಿಯಲ್ಲಿ ಚುನಾವಣಾ ಚಟುವಟಿಕೆ ಗರಿಗೆದರಿದೆ.

ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಪುತ್ತೂರಿನ ವಿವೇಕಾನಂದ ಪ್ರೌಢಶಾಲೆಯ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಈಗಾಗಲೇ ಸಮಾವೇಶಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಪುತ್ತೂರಿನಲ್ಲಿ ನಡೆಯಲಿರುವ ಕ್ಯಾಂಪ್ಕೋ ಸಮಾವೇಶಕ್ಕೆ 70 ಸಾವಿರದಿಂದ 1 ಲಕ್ಷ ಜನ ಸೇರುವ ನಿರೀಕ್ಷೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ