ಇಂದು ಬಳ್ಳಾರಿ, ಬೆಂಗಳೂರಲ್ಲಿ ಇಂದು ಅಮಿತ್‌ ಶಾ ಹವಾ

ಗುರುವಾರ, 23 ಫೆಬ್ರವರಿ 2023 (13:41 IST)
ಬಿಜೆಪಿಯ ಚುನಾವಣಾ ಚಾಣಕ್ಯ ಎಂದೇ ಕರೆಯಲ್ಪಡುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮುಂಬರುವ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ಉದ್ದೇಶದಿಂದ ಇಂದು ರಾಜ್ಯದ ಬಳ್ಳಾರಿ ಜಿಲ್ಲೆ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿರುವ ಅಮಿತ್‌ ಶಾ ಅವರು ಸಂಜೆ ಬೆಂಗಳೂರಿನಲ್ಲಿ ವಿವಿಧ ಕ್ಷೇತ್ರಗಳ ಆಯ್ದ ಪ್ರಮುಖರೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ರಾತ್ರಿ ಬೆಂಗಳೂರಿನಲ್ಲಿ ಪಕ್ಷ ಸಂಘಟನೆ ಕುರಿತು ಪ್ರಮುಖ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಮರುದಿನ ಶುಕ್ರವಾರ ಬೆಳಗ್ಗೆ ನಿರ್ಗಮಿಸಲಿದ್ದಾರೆ. ದೆಹಲಿಯಿಂದ ಹುಬ್ಬಳ್ಳಿಗೆ ವಿಶೇಷ ವಿಮಾನದಲ್ಲಿ
ಆಗಮಿಸುಮಿಸಿದ ಅಮಿತ್‌ ಶಾ ಹೆಲಿಕಾಪ್ಟರ್‌ ಮೂಲಕ ಸಂಡೂರಿಗೆ ಆಗಮಿಸಿದ್ದಾರೆ. ಹುಬ್ಬಳ್ಳಿಯ ಹೊಸಪೇಟೆ ರಸ್ತೆಯ ಎಸ್‌ಆರ್‌ಎಸ್‌ ಮೈದಾನದಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಸಮಾವೇಶದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ